Jeremiah 30:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಙೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
Kannada BSI Bible 2016
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.
Kannada Bible (KNCL) BSI 2016
‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.