Jeremiah 30:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
Kannada BSI Bible 2016
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.
Kannada Bible (KNCL) BSI 2016
ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.