Jeremiah 30:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಘಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
Kannada BSI Bible 2016
ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
Kannada Bible (KNCL) BSI 2016
ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.