Jeremiah 30:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಘಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.
Kannada BSI Bible 2016
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”