Jeremiah 30:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಪ್ರಶೆಐಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಘಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಘಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಘಹಳ ಭಯಪಟ್ಟಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
Kannada BSI Bible 2016
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
Kannada Bible (KNCL) BSI 2016
ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?