Jeremiah 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
Kannada BSI Bible 2016
ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು;
Kannada Bible (KNCL) BSI 2016
(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.