Jeremiah 30:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೆ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
Kannada BSI Bible 2016
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.
Kannada Bible (KNCL) BSI 2016
ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.