Jeremiah 31:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
Kannada BSI Bible 2016
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.