Jeremiah 31:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಘನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
Kannada BSI Bible 2016
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.
Kannada Bible (KNCL) BSI 2016
ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.