Jeremiah 31:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
Kannada BSI Bible 2016
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
Kannada Bible (KNCL) BSI 2016
ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.