Jeremiah 31:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.