Jeremiah 31:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಙೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.
Kannada BSI Bible 2016
ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು;
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.