Jeremiah 31:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಘಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
Kannada BSI Bible 2016
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.