Jeremiah 31:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರೇ, ದಾರಿತೋರುವ ಕಂಘಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
Kannada BSI Bible 2016
ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
Kannada Bible (KNCL) BSI 2016
“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.