Jeremiah 31:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಘದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
Kannada BSI Bible 2016
ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.
Kannada Bible (KNCL) BSI 2016
“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”