Jeremiah 31:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.
Kannada BSI Bible 2016
ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.
Kannada Bible (KNCL) BSI 2016
ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.