Jeremiah 31:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,
Kannada BSI Bible 2016
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,
Kannada Bible (KNCL) BSI 2016
ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.