Jeremiah 31:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಒಡಂಘಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಘಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಘಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಘಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
Kannada BSI Bible 2016
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
Kannada Bible (KNCL) BSI 2016
ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.