Jeremiah 31:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಘಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
Kannada BSI Bible 2016
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;
Kannada Bible (KNCL) BSI 2016
ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.