Jeremiah 31:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮ ನೆರೆಮನೆಯವರಿಗೂ ತಮ್ಮ ಘಂಧುಘಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಙೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
Kannada BSI Bible 2016
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.
Kannada Bible (KNCL) BSI 2016
ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”