Jeremiah 31:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
Kannada BSI Bible 2016
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
Kannada Bible (KNCL) BSI 2016
ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.