Jeremiah 31:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಣಗಳನ್ನು ಮತ್ತು ಘೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
Kannada BSI Bible 2016
ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.
Kannada Bible (KNCL) BSI 2016
ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”