Jeremiah 31:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.
Kannada BSI Bible 2016
ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ತಿರಿಗಿ ಸಮಾರ್ಯದ ಗುಡ್ಡಗಳಲ್ಲಿ ತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನನುಭವಿಸುವರು.
Kannada Bible (KNCL) BSI 2016
ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.