Jeremiah 31:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಊಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.
Kannada BSI Bible 2016
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿನವು ಬರುವದು, ಆಗ ಎಫ್ರಾಯೀವಿುನ ಗುಡ್ಡಗಳ ಮೇಲಿರುವ ಕಾವಲುಗಾರರು - ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ ಎಂದು ಕೂಗುವರು.
Kannada Bible (KNCL) BSI 2016
ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.