Jeremiah 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
Kannada BSI Bible 2016
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.