Jeremiah 31:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಘಹಳಷ್ಟು ಜನರು ಹಿಂತಿರುಗಿಬರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
Kannada BSI Bible 2016
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.
Kannada Bible (KNCL) BSI 2016
ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.