Jeremiah 32:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
Kannada BSI Bible 2016
ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಈ ದಿನದವರೆಗೆ ಇಸ್ರಾಯೇಲ್ಯರಲ್ಲಿಯೂ ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿ; ಅದು ಈಗಲೂ ಸ್ಥಿರವಾಗಿದೆ;
Kannada Bible (KNCL) BSI 2016
ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.