Jeremiah 32:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಘಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
Kannada BSI Bible 2016
ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಭುಜಪರಾಕ್ರಮವನ್ನು ತೋರಿಸಿ ಶಿಕ್ಷಾಹಸ್ತವನ್ನು ಎತ್ತಿ ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಿ
Kannada Bible (KNCL) BSI 2016
ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.