Jeremiah 32:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಘಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಘಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
Kannada BSI Bible 2016
ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;
Kannada Bible (KNCL) BSI 2016
ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.