Jeremiah 32:28 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;
Kannada Bible (KNCL) BSI 2016
ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.