Jeremiah 32:30 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೆ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಘಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.