Jeremiah 32:35 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೆನ್‌ಹಿನೊಐಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.
Kannada Bible (KNCL) BSI 2016
ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.