Jeremiah 32:36 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಊಗಳನ್ನು ಘಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ -
Kannada Bible (KNCL) BSI 2016
“ಖಡ್ಗ-ಕ್ಷಾಮ-ವ್ಯಾಧಿ ಇವುಗಳಿಂದ ಈ ನಗರವು ಬಾಬಿಲೋನಿನ ಅರಸನ ಕೈ ಹಿಡಿತಕ್ಕೆ ಸಿಕ್ಕಲಿದೆ ಎಂದು ನೀವು ಹೇಳುವ ವಿಷಯದಲ್ಲಿ ಇಸ್ರಯೇಲರ ದೇವರಾದ ಸರ್ವೇಶ್ವರ ಈಗ ಇಂತೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: