Jeremiah 32:39 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಊಸಙೇಕೆಂಘ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
Kannada Bible (KNCL) BSI 2016
ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.