Jeremiah 32:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
Kannada BSI Bible 2016
ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತಾಡುವನು;
Kannada Bible (KNCL) BSI 2016
ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು.