Jeremiah 32:40 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಘಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಘಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಙೇಕೆಂಘ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Kannada Bible (KNCL) BSI 2016
ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.