Jeremiah 32:42 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
Kannada Bible (KNCL) BSI 2016
“ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.