Jeremiah 32:43 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನ ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.
Kannada Bible (KNCL) BSI 2016
ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.