Jeremiah 32:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಘಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಊಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
Kannada BSI Bible 2016
ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು.
Kannada Bible (KNCL) BSI 2016
“ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು.