Jeremiah 32:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Kannada BSI Bible 2016
ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು - ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು, ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Kannada Bible (KNCL) BSI 2016
ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.