Jeremiah 33:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
Kannada BSI Bible 2016
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.