Jeremiah 33:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಘಡಿಕೆಯನ್ನೂ ಘದಲಾಯಿಸಘಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
Kannada BSI Bible 2016
ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
Kannada Bible (KNCL) BSI 2016
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.