Jeremiah 33:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”
Kannada BSI Bible 2016
ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.
Kannada Bible (KNCL) BSI 2016
ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”