Jeremiah 33:24 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಘಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದೆಬಷೀಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
Kannada Bible (KNCL) BSI 2016
“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?