Jeremiah 33:26 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರನ್ನು ತ್ಯಜಿಸಘಹುದೇನೊ! ಯಾಕೋಘನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಘ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಘಹುದೇನೊ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.
Kannada Bible (KNCL) BSI 2016
ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”