Jeremiah 33:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,
Kannada BSI Bible 2016
ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -
Kannada Bible (KNCL) BSI 2016
ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.