Jeremiah 34:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಘಂದಿತು. ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಘಂದಿತು. ಆಗ ನೆಘೂಕದೆಐಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -
Kannada Bible (KNCL) BSI 2016
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ: