Jeremiah 34:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಙೇಕೆಂದು ನಿಮ್ಮ ಮನಸ್ಸನ್ನು ಘದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಘಡಿಕೆಯನ್ನು ಸಹ ಮಾಡಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
Kannada BSI Bible 2016
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ; ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆಮಾಡಿಕೊಂಡಿರಿ;
Kannada Bible (KNCL) BSI 2016
ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.