Jeremiah 34:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈಗ ನೀವು ಮನಸ್ಸನ್ನು ಘದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
Kannada BSI Bible 2016
ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ.
Kannada Bible (KNCL) BSI 2016
ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.