Jeremiah 34:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
Kannada BSI Bible 2016
ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು;
Kannada Bible (KNCL) BSI 2016
“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.